ಚುನಾಯಿತ ಪ್ರತಿನಿಧಿಗಳಿಲ್ಲದೆ ಭಣಗುಡುತ್ತಿದ್ದ ರಾಜ್ಯದ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿಗಳ ಚುನಾವಣೆ ಡಿಸೆಂಬರ್ 15ರ ವೇಳೆಗೆ ತಾ.ಪಂ. ಜಿ.ಪಂ ಎಲೆಕ್ಷನ್ ನಡೆಯಲಿದೆ ಎಂಬ ಸುದ್ದಿ ಚುನಾವಣೆ ನಿರೀಕ್ಷೆಯಲ್ಲಿದ್ದವಲ್ಲಿ ಉತ್ಸಾಹ ತುಂಬಿದ್ದು, ಇವಾರದೊಳಗೆ ಅಧಿಕೃತವಾಗಿ ಕ್ಷೇತ್ರವಾರು ಮೀಸಲಾತಿ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಮಹತ್ವದ ಹೇಳಿಕೆ ನೀಡಿದ್ದಾರೆ.
ಕೊಪ್ಪಳ ನಗರದಲ್ಲಿ ಆಯೋಜಿಸಿದ್ದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ನಾಗಪ್ಪ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ಮುಂಬರುವ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಎದುರಿಸಲು ಕಾರ್ಯಕರ್ತರು ಪೂರ್ಣ ಪ್ರಮಾಣದಲ್ಲಿ ಸನ್ನದ್ಧರಾಗಬೇಕು ಎಂದರು.
ಎಸ್ಐಆರ್ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಅವರು, ಬಿಜೆಪಿಗೆ ನೈತಿಕತೆ ಇಲ್ಲ. ತಮಗೆ ಅಲ್ಪಸಂಖ್ಯಾತರ ಮತಗಳು ಬರುವುದಿಲ್ಲ ಎಂಬ ಕಾರಣಕ್ಕೆ ಮತದಾರರ ಪಟ್ಟಿಯಿಂದ ಉದ್ದೇಶಪೂರ್ವಕವಾಗಿ ಹೆಸರುಗಳನ್ನು ಕೈಬಿಡಲಾಗುತ್ತಿದೆ ಎಂದು ದೂರಿದರು.
ಚುನಾವಣಾ ಆಯೋಗದ ನಿರ್ಲಕ್ಷ್ಯ ಹಾಗೂ ಆಯುಕ್ತರ ತಪ್ಪಿನಿಂದಾಗಿ ಅಲ್ಪಸಂಖ್ಯಾತರ ಮತದಾರರನ್ನು ಪಟ್ಟಿಯಿಂದ ಹೊರಹಾಕಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.