LIVE TV StateNationalEntertainmentSportsHealth
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕಾರ್ಮಿಕನ ಮೇಲೆ ಹಲ್ಲೆ : ಕ್ರಷರ್ ಮಾಲೀಕನ ವಿರುದ್ಧ ಕ್ರಮಕ್ಕೆ ಒತ್ತಾಯ

ತುರುವೇಕೆರೆ: ಕ್ರಷರ್ ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ನನ್ನು ಕಟ್ಟಿ ಹಾಕಿ ಅಮಾನ ವೀಯವಾಗಿ ಹಲ್ಲೆ ನಡೆಸಿರುವ ಕ್ರಷರ್ ಮಾಲೀಕರ ಮೇಲೆ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕೆಂದು ಕರುನಾಡ ವಿಜಯಸೇನೆ ತಾಲೂಕು ಅಧ್ಯಕ್ಷ ಕೃಷ್ಣಮೂರ್ತಿ ಒತ್ತಾಯಿಸಿದರು.

ಮಾಧ್ಯಮದೊಂದಿಗೆ ಮಾತನಾಡಿದ ಅವರು, ತಾಲ್ಲೂಕಿನ ಕೋಳಘಟ್ಟ ಗ್ರಾಮದಲ್ಲಿ ಮಂಡ್ಯ ಮೂಲದ ವ್ಯಕ್ತಿ ಅಕ್ರಮವಾಗಿ ಕ್ರಷರ್ ನಡೆಸುತ್ತಿದ್ದು ಅದನ್ನು ನಿಲ್ಲಿಸುವಂತೆ ಈ ಹಿಂದೆ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಗಿತ್ತು. ಆದರೂ ಅಧಿಕಾರಿಗಳು ಕ್ರಮವಹಿಸಿರಲಿಲ್ಲ. ಆದರೆ ಈಗ ಅದೇ ಕ್ರಷರ್ ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ  ಕ್ರಷರ್ ಮಾಲೀಕ ಹಲ್ಲೆ ನಡೆಸಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ, ಮಾಧ್ಯಮಗಳಲ್ಲಿ ಪೋಟೋ, ವಿಡಿಯೋ ಹರಿದಾಡುತ್ತಿದೆ. ಕಾರ್ಮಿಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆದಿರುವುದು ಖಂಡನೀಯ.  ಕೂಡಲೇ ಕ್ರಷರ್ ಮಾಲೀಕನನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದರು.

ಕ್ರಷರ್ ಇಂದಾಗಿ ಕೋಳಘಟ್ಟ ಹಾಗೂ ಸುತ್ತಮುತ್ತ ಲಿನ ಗ್ರಾಮಗಳಲ್ಲಿನ ಪರಿಸರ ಹಾಳಾಗಿದೆ. ಅಲ್ಲಿನ ಜನರ ಆರೋಗ್ಯದ ಮೇಲೂ ಗಂಭೀರ ಪರಿಣಾಮ ಉಂಟಾಗಿದೆ. ಕೂಡಲೇ ಜಿಲ್ಲಾಧಿಕಾರಿಗಳು ಕ್ರಷರ್ ಅನ್ನು ಮುಚ್ಚಿಸಬೇಕು ಹಾಗೂ ಕಾರ್ಮಿಕನ ಮೇಲೆ ಹಲ್ಲೆ ನಡೆಸಿರುವ ಮಾಲೀಕನ ಮೇಲೆ ಕ್ರಮ ಜರುಗಿಸಬೇಕು. ಇಲ್ಲವಾದಲ್ಲಿ ಕರುನಾಡ ವಿಜಯಸೇನೆ ಸಂಘಟನೆಯು ವಿವಿಧ ಸಂಘ ಸಂಸ್ಥೆಗಳು ಹಾಗೂ ಆ ಭಾಗದ ರೈತರು, ಜನರೊಡಗೂಡಿ ಪ್ರತಿಭಟನೆ ನಡೆಸಲಾಗುವುದು ಎಂದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ.2ರಿಂದ ಹೆಸರು ಕಾಳು ಖರೀದಿ ಕೇಂದ್ರ ಆರಂಭ!ವಿದ್ಯಾರ್ಥಿಗಳೊಂದಿಗೆ ಸಚಿವೆ ಶೋಭಾ ಕರಂದ್ಲಾಜೆ ಸಂವಾದಪಾವಗಡದಲ್ಲಿ ಬರ ಪರಿಸ್ಥಿತಿ ಅವಲೋಕಿಸಿದ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ಪರ್ಯಾಯ ವ್ಯವಸ್ಥೆ ಮಾಡದೆ ತುಮಕೂರಿನ ಹೆದ್ದಾರಿ ಬಂದ್ಕಾರ್ಮಿಕನ ಸಾವಿಗೆ ನ್ಯಾಯಕ್ಕಾಗಿ ವಿಸಾಕಾ ಕಾರ್ಖಾನೆ ಮುಂದೆ ಬೃಹತ್‌ ಪ್ರತಿಭಟನೆ- Video ನೋಡಿಮೂಲಸೌಕರ್ಯ ಒದಗಿಸಲು ಆಗ್ರಹಿಸಿ ವಸತಿ ಶಾಲಾ ಮಕ್ಕಳ ಪ್ರತಿಭಟನೆಪಾವಗಡದಲ್ಲಿ ಟವರ್‌ ಹತ್ತಿ ಯುವತಿ ಆತ್ಮಹತ್ಯೆಗೆ ಯತ್ನ!ʼಕಲಬೆರಕೆ ರಹಿತ ಪೌಷ್ಠಿಕ ಆಹಾರ ಹಾಗೂ ಕಲಬೆರಕೆ ರಹಿತ ಔಷಧ ದೊರೆಯುವಂತಾಗಬೇಕುʼ- ಮುರಳೀಧರ ಹಾಲಪ್ಪಕೃಷಿ ಹೊಂಡಕ್ಕೆ ಬಿದ್ದ ಪತ್ನಿ ರಕ್ಷಿಸಲು ಹೋದ ಪತಿ; ಇಬ್ಬರೂ ನೀರುಪಾಲು!'ಬಿಜೆಪಿ ಏಜೆಂಟ್ ಗ್ಯಾನೇಶ್ ಕುಮಾರ್ ವಜಾಗೊಳಿಸಿ': ಸಿಪಿಐ ಮುಖಂಡ ಗಿರೀಶ್