LIVE TV StateNationalEntertainmentSportsHealth
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಪಾವಗಡದಲ್ಲಿ ಬರ ಪರಿಸ್ಥಿತಿ ಅವಲೋಕಿಸಿದ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್

'ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಿ; ಕೇಂದ್ರ ಸ್ಥಾನದಲ್ಲಿದ್ದು ಜನರ ಸಮಸ್ಯೆ ಆಲಿಸಿ'

ಪಾವಗಡ: ತಾಲ್ಲೂಕಿನಲ್ಲಿ ತೀವ್ರ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅವರು ಗುರುವಾರ ಪಾವಗಡಕ್ಕೆ ಭೇಟಿ ನೀಡಿ ಬರ ನಿರ್ವಹಣಾ ಕಾರ್ಯಗಳ ಪ್ರಗತಿಯನ್ನು ಪರಿಶೀಲಿಸಿದರು. ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಎಚ್ಚರಿಕೆ ವಹಿಸುವುದರ ಜೊತೆಗೆ, ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಕರ್ತವ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
ತಾಲ್ಲೂಕಿನ ರಾಜವಂತಿ ಗ್ರಾಮದಲ್ಲಿ ಬರ ಪರಿಹಾರದಡಿ ಕೊರೆಸಲಾಗಿರುವ ನೂತನ ಕೊಳವೆಬಾವಿಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಬೋರ್‌ವೆಲ್‌ನಲ್ಲಿ ಲಭ್ಯವಾಗುವ ನೀರಿನ ಪ್ರಮಾಣ ಹಾಗೂ ಅದನ್ನು ಗ್ರಾಮಸ್ಥರಿಗೆ ಸಮರ್ಪಕವಾಗಿ ವಿತರಿಸಲು ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ಪಡೆದರು. ಇದೇ ವೇಳೆ ರೈತರು ಬಿತ್ತನೆ ಮಾಡಿರುವ ಬೆಳೆಗಳ ಸ್ಥಿತಿ ಹಾಗೂ ಫಸಲಿನ ಪ್ರಮಾಣವನ್ನು ಖುದ್ದಾಗಿ ಪರಿಶೀಲಿಸಿದರು.
ನಂತರ ಪಾವಗಡ ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿ, ಬರ ಪರಿಸ್ಥಿತಿ ನಿರ್ವಹಣೆಗೆ ಕೈಗೊಂಡಿರುವ ಕ್ರಮಗಳ ಪ್ರಗತಿಯನ್ನು ಪರಿಶೀಲಿಸಿದರು.
news_1793274617_0_671.webp
ಗ್ರಾಮೀಣ ಭಾಗದಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಯಾಗುತ್ತಿಲ್ಲ, ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ವಾಸ್ತವ್ಯ ಹೂಡುತ್ತಿಲ್ಲ. ಸಮಸ್ಯೆಗಳು ಎದುರಾದಾಗ ಯಾರನ್ನು ಸಂಪರ್ಕಿಸಬೇಕು ಎಂಬುದು ತಿಳಿಯುತ್ತಿಲ್ಲ ಎಂದು ರೈತರು ಅಳಲು ತೋಡಿಕೊಂಡಿರುವ ಹಿನ್ನೆಲೆಯಲ್ಲಿ, ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದರು.
ದನಕರುಗಳಿಗೆ ಕುಡಿಯುವ ನೀರು ಕಲ್ಪಿಸಲು ರೈತ ಸಂಘದ ಅಧ್ಯಕ್ಷ ಪೂಜಾರಪ್ಪ ಮನವಿ
ದೊಡ್ಡಹಟ್ಟಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಪೂಜಾರಪ್ಪ ಅವರ ನೇತೃತ್ವದಲ್ಲಿ ರೈತರು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ, ಗ್ರಾಮದಲ್ಲಿ ಕೊಳವೆಬಾವಿ ಮೂಲಕ ದನಕರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಮನವಿ ಸಲ್ಲಿಸಿದರು. ಮತ್ತು ಬ್ಯಾಡನೂರು ಗ್ರಾಮ ಪಂಚಾಯಿತಿಯಲ್ಲಿ ವಾಟರ್ ಮ್ಯಾನ್ ನೇಮಿಸಬೇಕೆಂದು ಮತ್ತು ಒಂದು ಎಕರೆಗೆ 25000 ಬರ ಪರಿಹಾರ ನೀಡಬೇಕೆಂದು ಮನವಿ ನೀಡಿದರು, ಇದೆ ವೇಳೆ ಗ್ರಾಮದ ಶಿವು ಎನ್ನುವರು ಗ್ರಾಮದಲ್ಲಿ ಸರ್ಕಾರಿ ಶಾಲೆಗೆ ಕುಡಿಯುವ ನೀರಿನ ಸಂಪರ್ಕ ಇಲ್ಲ, 4 ಎಕರೆ ಜಮೀನನ್ನ  ದಾನಿಗಳು ಶಾಲೆಗೆ ನೀಡಿದ್ದು ಒತ್ತುವರಿಯಾಗುತ್ತದೆ ಇದನ್ನ ತಪ್ಪಿಸಬೇಕೆಂದು, ಮತ್ತು ಬ್ಯಾಡನೂರು ಗ್ರಾಮಕ್ಕೆ ರಾಜ್ಯ ರಸ್ತೆ ಸಾರಿಗೆ ಸೌಲಭ್ಯವನ್ನು ಒದಗಿಸಬೇಕೆಂದು ಒತ್ತಾಯಿಸಿದರು,  ರೈತರ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು, ಈ ಕುರಿತು ಆದಷ್ಟು ಬೇಗ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಬರ ಪರಿಸ್ಥಿತಿಯಲ್ಲಿ ಕುಡಿಯುವ ನೀರಿನ ಪೂರೈಕೆ, ರೈತರ ಬೆಳೆಗಳ ಸ್ಥಿತಿ ಹಾಗೂ ಜಾನುವಾರುಗಳಿಗೆ ನೀರಿನ ವ್ಯವಸ್ಥೆ ಕಲ್ಪಿಸುವುದು ಸೇರಿದಂತೆ ಅಗತ್ಯ ಕ್ರಮಗಳ ಅನುಷ್ಠಾನಕ್ಕೆ ಅಧಿಕಾರಿಗಳು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
 ತಾಲೂಕು ಪಂಚಾಯಿತಿಯಲ್ಲಿ ಅಧಿಕಾರಿಗಳ ಸಭೆ ಮುಗಿದ ನಂತರ ಜಿಲ್ಲಾಧಿಕಾರಿ ಶುಭಕಲ್ಯಾಣ  ಪತ್ರಿಕಾಗೋಷ್ಠಿ ಕುರಿತು ಮಾತನಾಡಿ,
 ತುಂಗಭದ್ರಾ ಯೋಜನೆಯ ಕುಡಿವ ನೀರನ್ನು ತಾಲೂಕಿನ ಜನತೆ ಎಲ್ಲರು ತಪ್ಪದೆ ನೀರನ್ನು ಕುಡಿಯಬೇಕೆಂದು ಶುದ್ಧೀಕರಿಸಿ ನೀರು ಹರಿಸಲಾಗುತ್ತಿದ್ದು, ನೀರನ್ನು ಕುಡಿಯಬೇಕೆಂದು ಜಿಲ್ಲಾಧಿಕಾರಿಗಳು ತಾಲೂಕಿನ ಜನತೆಗೆ ಸೂಚಿಸಿದರು. ಬರಪರಿಸ್ಥಿತಿಯನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದ್ದು, ಜಿಲ್ಲೆಯಲ್ಲಿ 30,000 ಲೀಟರ್ ಹಾಲು,ಹೆಚ್ಚಾಗಿದೆ, ಆದರೆ ಪಾವಗಡ ತಾಲೂಕಿನಲ್ಲಿ ಕಳೆದ ಸಪ್ಟೆಂಬರ್ ಗೆ ಹೋಲಿಸಿದರೆ ಹಾಲು ಉತ್ಪಾದನೆ ಕಡಿಮೆಯಾಗಿದೆ ಈ ಬಗ್ಗೆ ಪರಿಶೀಲಿಸಲಾಗುವುದು, ತಾಲೂಕಿನಲ್ಲಿ ಇನ್ನೂ 14 ವಾರಗಳ ಕಾಲ ಮೇವು ಸಮಸ್ಯೆ ಇರುವುದಿಲ್ಲ ಎಂಬ ಮಾಹಿತಿಯನ್ನು ಅಧಿಕಾರಿಗಳು ನೀಡಿದ್ದಾರೆ, ಈ ಬಗ್ಗೆ ಜಿಲ್ಲಾ ಮಟ್ಟ ಮತ್ತು ತಾಲೂಕು ಮಟ್ಟದಲ್ಲಿ ಟಾಸ್ಕ್ ಫೋರ್ಸ್  ಸಭೆಯನ್ನು ನಡೆಸಲಾಗಿದೆ, ತಾಲೂಕಿನಲ್ಲಿ ವಿದ್ಯುತ್ ಸರಬರಾಜಿ ನಲ್ಲಿ ವ್ಯತ್ಯಯ ಆಗುವುದನ್ನು ತಪ್ಪಿಸುವಂತೆ  ಬೆಸ್ಕಾಂನ ಎಸ್. ಸಿ.ಗೆ ಸೂಚಿಸಲಾಗಿದೆ, ಮತ್ತು ಬರ ಪರಿಸ್ಥಿತಿಯ ಸಮಸ್ಯೆಗಳನ್ನು ನೇರವಾಗಿ ತಿಳಿಸಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದಿನದ 24 ಗಂಟೆಗಳು ದೂರು ನೀಡಬಹುದಾಗಿದ್ದು, 0816,2213400 ಸಂಪರ್ಕಿಸಬಹುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪಾವಗಡ ತಹಸೀಲ್ದಾರ್ ವೈ. ರವಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಧುಸೂಧನ್, ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ವಿಭಾಗದ ಇಂಜಿನಿಯರ್ ಬಸವಲಿಂಗಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ರೇಣುಕಮ್ಮ, ಕೃಷಿ ಇಲಾಖೆ ಅಧಿಕಾರಿ ಅಜಯ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Author
ವಾಜಿದ್ ಖಾನ್
ಕಳೆದ 30 ವರ್ಷಗಳಿಂದ ಪತ್ರಿಕಾ ರಂಗದಲ್ಲಿ ಸೇವೆ ಸಲ್ಲಿಸುತ್ತಿರುವ ಇವರು, ತಮ್ಮ ತೀಕ್ಷ್ಣ ಬರವಣಿಗೆ ಮೂಲಕ ಜನಮನ್ನಣೆ ಗಳಿಸಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗೆ ಇವರಿಗೆ ತುಮಕೂರು ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಜೊತೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕೊಡಮಾಡುವ ಮನವಿಯ ಮೌಲ್ಯ ವಿಭಾಗದ ಹೆಚ್ಆರ್ ಗುಂಡೂರಾವ್ ಸ್ಮಾರಕ ಪ್ರಶಸ್ತಿಗೆ ಇವರು ಭಾಜನರಾಗಿದ್ದಾರೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ.2ರಿಂದ ಹೆಸರು ಕಾಳು ಖರೀದಿ ಕೇಂದ್ರ ಆರಂಭ!ವಿದ್ಯಾರ್ಥಿಗಳೊಂದಿಗೆ ಸಚಿವೆ ಶೋಭಾ ಕರಂದ್ಲಾಜೆ ಸಂವಾದಪಾವಗಡದಲ್ಲಿ ಬರ ಪರಿಸ್ಥಿತಿ ಅವಲೋಕಿಸಿದ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ಪರ್ಯಾಯ ವ್ಯವಸ್ಥೆ ಮಾಡದೆ ತುಮಕೂರಿನ ಹೆದ್ದಾರಿ ಬಂದ್ಕಾರ್ಮಿಕನ ಸಾವಿಗೆ ನ್ಯಾಯಕ್ಕಾಗಿ ವಿಸಾಕಾ ಕಾರ್ಖಾನೆ ಮುಂದೆ ಬೃಹತ್‌ ಪ್ರತಿಭಟನೆ- Video ನೋಡಿಮೂಲಸೌಕರ್ಯ ಒದಗಿಸಲು ಆಗ್ರಹಿಸಿ ವಸತಿ ಶಾಲಾ ಮಕ್ಕಳ ಪ್ರತಿಭಟನೆಪಾವಗಡದಲ್ಲಿ ಟವರ್‌ ಹತ್ತಿ ಯುವತಿ ಆತ್ಮಹತ್ಯೆಗೆ ಯತ್ನ!ʼಕಲಬೆರಕೆ ರಹಿತ ಪೌಷ್ಠಿಕ ಆಹಾರ ಹಾಗೂ ಕಲಬೆರಕೆ ರಹಿತ ಔಷಧ ದೊರೆಯುವಂತಾಗಬೇಕುʼ- ಮುರಳೀಧರ ಹಾಲಪ್ಪಕೃಷಿ ಹೊಂಡಕ್ಕೆ ಬಿದ್ದ ಪತ್ನಿ ರಕ್ಷಿಸಲು ಹೋದ ಪತಿ; ಇಬ್ಬರೂ ನೀರುಪಾಲು!'ಬಿಜೆಪಿ ಏಜೆಂಟ್ ಗ್ಯಾನೇಶ್ ಕುಮಾರ್ ವಜಾಗೊಳಿಸಿ': ಸಿಪಿಐ ಮುಖಂಡ ಗಿರೀಶ್