LIVE TV StateNationalEntertainmentSportsHealth
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಡಾ. ಜಿ.ಪರಮೇಶ್ವರ್ ಆರೋಗ್ಯದಲ್ಲಿ ಚೇತರಿಕೆ: ಸಂಜೆ ವೇಳೆಗೆ ಡಿಸ್ಚಾರ್ಜ್

ಡಿಸಿಎಂ ಪರಮೇಶ್ವರ್? ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ನೀಡಿದ ವೈದ್ಯರು
ಬೆಂಗಳೂರು: ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರು ಕಂಡುಬಂದು ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಕರ್ನಾಟಕದ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್  ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಇಂದು ಸಂಜೆ ವೇಳೆಗೆ ಡಿಸ್ಚಾರ್ಜ್ ಮಾಡುವುದಾಗಿ ಆಸ್ಪತ್ರೆಯ ವೈದ್ಯಕೀಯ ಮಂಡಳಿ ತಿಳಿಸಿದೆ.

ಇಂದು ಬೆಳಗ್ಗೆ ಬೆಂಗಳೂರಿನಲ್ಲಿ ನಡೆದ ಬ್ಯಾಡ್ಮಿಂಟನ್ ಅಸೋಸಿಯೇಷನ್‌ನ ಕಾರ್ಯಕ್ರಮವೊಂದರಲ್ಲಿ ಡಾ. ಜಿ. ಪರಮೇಶ್ವರ್ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಅವರಿಗೆ ಹಠಾತ್ತಾಗಿ ಎದೆನೋವು ಕಾಣಿಸಿಕೊಂಡಿತ್ತು.. ಖಾಸಗಿ ಆಸ್ಪತ್ರೆಯ ನುರಿತ ವೈದ್ಯರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಸದ್ಯ ಅವರು ಈಗ ಹುಷಾರಾಗುತ್ತಿದ್ದಾರೆಂಬ ವೈದ್ಯರ ಮಾಹಿತಿ ಎಲ್ಲರಲ್ಲೂ ನೆಮ್ಮದಿಯ ನಿಟ್ಟುಸಿರು ಬರಿಸಿದೆ.

ಡಾ. ಜಿ. ಪರಮೇಶ್ವರ್ ಅವರ ಆರೋಗ್ಯ ಕುರಿತು ವೈದೇಹಿ ಆಸ್ಪತ್ರೆಯ ಹಿರಿಯ ವೈದ್ಯರಾದ ಡಾ. ವಿ.ಕೆ. ಶ್ರೀನಿವಾಸ್ ಮಾಹಿತಿ ಹಂಚಿಕೊಂಡಿದ್ದು,  ಡಾ. ಜಿ. ಪರಮೇಶ್ವರ್ ಅವರ ಆರೋಗ್ಯ ಸಂಪೂರ್ಣ ಸ್ಥಿರವಾಗಿದೆ ಎಂದಿದ್ದಾರೆ.

ಇಂದು ಬೆಳಗ್ಗೆ ೧೦:೩೦ರ ಸುಮಾರಿಗೆ  ಪರಮೇಶ್ವರ್ ಅವರು ಆಸ್ಪತ್ರೆಗೆ ಬಂದ ತಕ್ಷಣವೇ ವೈದ್ಯರ ತಂಡವು ಅವರ ಸಂಪೂರ್ಣ ತಪಾಸಣೆ ನಡೆಸಿ ಅಗತ್ಯ ಚಿಕಿತ್ಸೆ ನೀಡಿದೆ. ಮಾಧ್ಯಮಗಳಲ್ಲಿ ಬಂದ ವರದಿಗಳಂತೆ ಅವರಿಗೆ ಯಾವುದೇ ರೀತಿಯ ಹೃದಯಾಘಾತವಾಗಿಲ್ಲ. ಅವರ ಹೃದಯದ ಕಾರ್ಯನಿರ್ವಹಣೆ ಹಾಗೂ ಇಸಿಜಿ ವರದಿಗಳು ಸಹಜವಾಗಿದ್ದು, ಆರೋಗ್ಯಕರವಾಗಿವೆ ಎಂದು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಾವಗಡದಲ್ಲಿ ಬರ ಪರಿಸ್ಥಿತಿ ಅವಲೋಕಿಸಿದ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ಪರ್ಯಾಯ ವ್ಯವಸ್ಥೆ ಮಾಡದೆ ತುಮಕೂರಿನ ಹೆದ್ದಾರಿ ಬಂದ್ಕಾರ್ಮಿಕನ ಸಾವಿಗೆ ನ್ಯಾಯಕ್ಕಾಗಿ ವಿಸಾಕಾ ಕಾರ್ಖಾನೆ ಮುಂದೆ ಬೃಹತ್‌ ಪ್ರತಿಭಟನೆ- Video ನೋಡಿಮೂಲಸೌಕರ್ಯ ಒದಗಿಸಲು ಆಗ್ರಹಿಸಿ ವಸತಿ ಶಾಲಾ ಮಕ್ಕಳ ಪ್ರತಿಭಟನೆಪಾವಗಡದಲ್ಲಿ ಟವರ್‌ ಹತ್ತಿ ಯುವತಿ ಆತ್ಮಹತ್ಯೆಗೆ ಯತ್ನ!ʼಕಲಬೆರಕೆ ರಹಿತ ಪೌಷ್ಠಿಕ ಆಹಾರ ಹಾಗೂ ಕಲಬೆರಕೆ ರಹಿತ ಔಷಧ ದೊರೆಯುವಂತಾಗಬೇಕುʼ- ಮುರಳೀಧರ ಹಾಲಪ್ಪಕೃಷಿ ಹೊಂಡಕ್ಕೆ ಬಿದ್ದ ಪತ್ನಿ ರಕ್ಷಿಸಲು ಹೋದ ಪತಿ; ಇಬ್ಬರೂ ನೀರುಪಾಲು!'ಬಿಜೆಪಿ ಏಜೆಂಟ್ ಗ್ಯಾನೇಶ್ ಕುಮಾರ್ ವಜಾಗೊಳಿಸಿ': ಸಿಪಿಐ ಮುಖಂಡ ಗಿರೀಶ್35ರಲ್ಲಿ 26 ಕಾಂಗ್ರೆಸ್ ಶಾಸಕರಿದ್ದರೂ ಸೋಲು ವಿಪರ್ಯಾಸ...!ಬ್ರೇಕಿಂಗ್: ಕಾರ್ಖಾನೆಯ ಮೆಷಿನ್‍ಗೆ ಸಿಕ್ಕಿ ಗುತ್ತಿಗೆ ಕಾರ್ಮಿಕ ಸಾ*ವು!?