LIVE TV StateNationalEntertainmentSportsHealth
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಆಕರ್ಷಕ ಕಲಾ ಪ್ರದರ್ಶನ: ನಾಗಸಾಧುಗಳ ದರ್ಶನ

ಶಿರಾದಲ್ಲಿ ಅದ್ಧೂರಿಯಾಗಿ ನಡೆದ ಹಿಂದೂ ಮಹಾ ಗಣಪತಿ ವಿಸರ್ಜನಾ ಮಹೋತ್ಸವ

ಶಿರಾ: ಶಿರಾ ನಗರದಲ್ಲಿ ಹಿಂದೂ ಮಹಾ ಗಣಪತಿಯ ಟ್ರಸ್ಟ್ ವತಿಯಿಂದ ಪ್ರತಿಷ್ಠಾಪಿಸಿರುವ ೧೦ನೇ ವರ್ಷದ ಗಣಪತಿಯ ವಿಸರ್ಜನಾ ಮಹೋತ್ಸವ ಭಾನುವಾರ ಅದ್ಧೂರಿಯಾಗಿ ನೆರವೆರಿತು.

 ಶೋಭಾಯಾತ್ರೆಯ ಮಾರ್ಗದುದ್ದಕ್ಕೂ ಸಾವಿರಾರು ಜನ ಪಾಲ್ಗೊಂಡಿದ್ದರು. ಹಿರಿಯರು, ಕಿರಿಯರು, ಮಹಿಳೆಯರು ಕಲಾತಂಡಗಳ ನಾದಕ್ಕೆ ಹೆಜ್ಜೆ ಹಾಕಿ ಕುಣಿದು ಸಂಭ್ರಮಿಸಿದರು.

news_1791120952_4_816.webp

 

ಬೆಳಿಗ್ಗೆ ೧೦ ಗಂಟೆಗೆ ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಠದ ಪೀಠಾಧ್ಯಕ್ಷರಾದ ಶ್ರೀ ನಂಜಾವಧೂತ ಸ್ವಾಮೀಜಿಗಳು, ಶಾಸಕ ಟಿ.ಬಿ.ಜಯಚಂದ್ರ, ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಸೇರಿದಂತೆ ಹಲವು ಗಣ್ಯರು ಹಿಂದೂ ಮಹಾ ಗಣಪತಿಗೆ ಪೂಜೆ ಸಲ್ಲಿಸಿ ಶೋಭಾಯಾತ್ರೆಗೆ ಚಾಲನೆ ನೀಡಿದರು. ಮಾಜಿ ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ, ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್.ಆರ್.ಗೌಡ, ಕನಕ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಮಂಜುನಾಥ್, ತಾಲೂಕು ಜೆಡಿಎಸ್ ಅಧ್ಯಕ್ಷ ಬಿ.ಎಸ್.ಸತ್ಯಪ್ರಕಾಶ್, ಜೆಡಿಎಸ್ ಮುಖಂಡ ಆರ್.ಉಗ್ರೇಶ್, ನಗರಸಭೆ ಸದಸ್ಯ ಬಿ.ಅಂಜಿನಪ್ಪ, ಆರ್.ರಾಮು, ಉಮಾ ವಿಜಯರಾಜ್ ಸೇರಿದಂತೆ ಸಮಿತಿ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಮುಖಂಡರು ಹಾಜರಿದ್ದರು.

ಶೋಭಾಯಾತ್ರೆ ತೆರಳುವ ಮಾರ್ಗದುದ್ದಕ್ಕೂ ಕೇಸರಿ ಬಾವುಟ, ದೀಪಾಲಂಕಾರ ಮಾಡಲಾಗಿತ್ತು. ಹಿಂದೂ ಮಹಾಗಣಪತಿ ಬಳಗದ ಸದಸ್ಯರು, ಸಾರ್ವಜನಿಕರು, ಮಹಿಳೆಯರು ಕೇಸರಿ ಶಾಲು ಧರಿಸಿ ಸಂಭ್ರಮದಿಂದ ಪಾಲ್ಗೊಂಡಿದ್ದರು, ಮೆರವಣಿಗೆಯಲ್ಲಿ ನಾಗಸಾಧುಗಳು, ಮಂಗಳವಾದ್ಯ, ಮಂಗಳೂರು ಭಾಗದ ಪ್ರಸಿದ್ಧ ಹುಲಿ ಕುಣಿತ, ಮಕ್ಕಳ ಭಜನಾ ತಂಡ, ಡಿಜೆ, ವಯಲಿನ್ ಚಂಡೆ, ತಮಟೆ ವಾದ್ಯ, ನಾಸಿಕ್ ಡೋಲ್ ಹಾಗೂ ಇತರೆ ಜಾನಪದ ಕಲಾ ತಂಡಗಳ ಆಕರ್ಷಕ ಪ್ರದರ್ಶನ ಮೆರವಣಿಗೆಯ ವೈಭವ ಹೆಚ್ಚಿಸಿತ್ತು. 

news_1791120951_0_237.webp

ಹಿಂದೂ ಮಹಾ ಗಣಪತಿ ವಿಸರ್ಜನಾ ಮಹೋತ್ಸವದ ಶೋಭಾಯಾತ್ರೆಯು ಹಿಂದೂ ಮಹಾಗಣಪತಿ ಪ್ರತಿಷ್ಠಾಪನಾ ಸ್ಥಳದಿಂದ ಅಂಬೇಡ್ಕರ್ ಸರ್ಕಲ್, ಮುಖ್ಯರಸ್ತೆ, ಬನ್ನಿಮಂಟಪ ರಸ್ತೆ, ಹಳೇ ಖಾಸಗಿ ಬಸ್ ನಿಲ್ದಾಣ ರಸ್ತೆ, ಹಳೇ ರಾ.ಹೆ. ರಸ್ತೆ, ದರ್ಗಾ ಸರ್ಕಲ್, ಸಂತೇಪೇಟೆ ರಸ್ತೆ, ಬಾಲಾಜಿ ನಗರ ರಸ್ತೆಯ ಮುಖಾಂತರ ಜಾಜಮ್ಮನ ಕಟ್ಟೆಯಲ್ಲಿ ವಿಸರ್ಜನೆ ಮಾಡಲಾಯಿತು. 

news_1791120951_1_525.webp

ಶೋಭಾಯಾತ್ರೆಯಲ್ಲಿ  ಪಿ ಆರ್ ಮಂಜುನಾಥ್, ಹಿಂದೂ ಮಹಾಗಣಪತಿ ಚಾರಿಟೇಬಲ್ ಟ್ರಸ್ಟ್ ನ ಮಾಜಿ ನಗರಸಭಾ ಸದಸ್ಯ ಆರ್.ರಾಘವೇಂದ್ರ, ವಿಜಯ್ ರಾಜ್, ಆಂಜಿನಪ್ಪ, ಸುಧಾಕರ್ ಗೌಡ, ನರೇಂದ್ರ, ಕರಣ್, ನಟರಾಜ್, ನಗರಸಭೆ ಆಶ್ರಯ ಸಮಿತಿ ಸದಸ್ಯ ನೂರುದ್ದೀನ್, ಜಯಲಕ್ಷ್ಮಿ, ಮಂಜುನಾಥ್, ವಾಜರಹಳ್ಳಿ ರಮೇಶ್, ಮಣಿಕಂಠ, ಅಂಜನ್ ಕುಮಾರ್, ಹೇಮಂತ್ ಗೌಡ, ಶೇಷಾನಾಯ್ಕ, ಉಮೇಶ್, ಪದ್ಮಾ ಮಂಜುನಾಥ್, ಲಲಿತಮ್ಮ ಸೇರಿದಂತೆ ಪ್ರಮುಖರು ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ.2ರಿಂದ ಹೆಸರು ಕಾಳು ಖರೀದಿ ಕೇಂದ್ರ ಆರಂಭ!ವಿದ್ಯಾರ್ಥಿಗಳೊಂದಿಗೆ ಸಚಿವೆ ಶೋಭಾ ಕರಂದ್ಲಾಜೆ ಸಂವಾದಪಾವಗಡದಲ್ಲಿ ಬರ ಪರಿಸ್ಥಿತಿ ಅವಲೋಕಿಸಿದ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ಪರ್ಯಾಯ ವ್ಯವಸ್ಥೆ ಮಾಡದೆ ತುಮಕೂರಿನ ಹೆದ್ದಾರಿ ಬಂದ್ಕಾರ್ಮಿಕನ ಸಾವಿಗೆ ನ್ಯಾಯಕ್ಕಾಗಿ ವಿಸಾಕಾ ಕಾರ್ಖಾನೆ ಮುಂದೆ ಬೃಹತ್‌ ಪ್ರತಿಭಟನೆ- Video ನೋಡಿಮೂಲಸೌಕರ್ಯ ಒದಗಿಸಲು ಆಗ್ರಹಿಸಿ ವಸತಿ ಶಾಲಾ ಮಕ್ಕಳ ಪ್ರತಿಭಟನೆಪಾವಗಡದಲ್ಲಿ ಟವರ್‌ ಹತ್ತಿ ಯುವತಿ ಆತ್ಮಹತ್ಯೆಗೆ ಯತ್ನ!ʼಕಲಬೆರಕೆ ರಹಿತ ಪೌಷ್ಠಿಕ ಆಹಾರ ಹಾಗೂ ಕಲಬೆರಕೆ ರಹಿತ ಔಷಧ ದೊರೆಯುವಂತಾಗಬೇಕುʼ- ಮುರಳೀಧರ ಹಾಲಪ್ಪಕೃಷಿ ಹೊಂಡಕ್ಕೆ ಬಿದ್ದ ಪತ್ನಿ ರಕ್ಷಿಸಲು ಹೋದ ಪತಿ; ಇಬ್ಬರೂ ನೀರುಪಾಲು!'ಬಿಜೆಪಿ ಏಜೆಂಟ್ ಗ್ಯಾನೇಶ್ ಕುಮಾರ್ ವಜಾಗೊಳಿಸಿ': ಸಿಪಿಐ ಮುಖಂಡ ಗಿರೀಶ್