LIVE TV StateNationalEntertainmentSportsHealth
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಶಿರಾದಲ್ಲಿ ಇಂದು ಗಣಪತಿ ವಿಸರ್ಜನಾ ಶೋಭಾಯಾತ್ರೆ: 1500 ಪೊಲೀಸರಿಂದ ಬಿಗಿ ಬಂದೋಬಸ್ತ್

ನಗರದ ಪ್ರಮುಖ ಬೀದಿಗಳಲ್ಲಿ ಪೊಲೀಸ್ ರೂಟ್ ಮಾರ್ಚ್

ಶಿರಾ: ಶಿರಾ ನಗರದಲ್ಲಿ ಇಂದು (ಭಾನುವಾರ) ನಡೆಯಲಿರುವ 10ನೇ ವರ್ಷದ ಹಿಂದೂ ಮಹಾ ಗಣಪತಿ ಅದ್ದೂರಿ ವಿಸರ್ಜನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಿರಾ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.
ಹಿಂದೂ ಮಹಾಗಣಪತಿಯ ವಿಸರ್ಜನಾ ಮಹೋತ್ಸವದ ಶೋಭಾಯಾತ್ರೆಯ ವೈಭವ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಮೆರಣಿಗೆಯಲ್ಲಿ ಭಾಗವಹಿಸಲಿರುವ ಅಘೋರಿ ಸಾಧುಸಂತರು ಹರಗುರುಚರಮೂತಿಗಳು ಮುಖ್ಯ ಆಕರ್ಷಣೆಯಾಗಿದ್ದಾರೆ. ಸಾಕಷ್ಟು ಸಾಂಸ್ಕೃತಿಕ ಕಲಾ ತಂಡಗಳು ನೋಡುಗ ಭಕ್ತರನ್ನು ರೋಮಾಂಚನಗೊಳಿಸಲಿದ್ದಾರೆ. ಕಲೆ-ಸಂಗೀತ ಮತ್ತು ಸಂಸ್ಕೃತಿಯ ಅನಾವರಣ ಮಾಡುವಂತಹ ವೈಭವದ ಮೆರವಣಿಗೆಗೆ ಶಿರಾ ಸಾಕ್ಷಿಯಾಗಲಿದೆ
ಮೆರವಣಿಗೆ ಸೌಹಾರ್ಧತೆಯಿಂದ ಸಾಗಲು ಶಿರಾ ಡಿವೈಎಸ್‌ಪಿ ಬಿ.ಕೆ. ಶೇಖರ್ ಅವರ ಮಾರ್ಗದರ್ಶನದಲ್ಲಿ, ಸಿಪಿಐ ಪ್ರವೀಣ್ ಕುಮಾರ್ ಅವರ ನೇತೃತ್ವದಲ್ಲಿ ನಗರದ ಪ್ರಮುಖ ಬೀದಿಗಳಲ್ಲಿ ಪೊಲೀಸ್ ಸಿಬ್ಬಂದಿ ರೂಟ್ ಮಾರ್ಚ್ ನಡೆಸಿ, ಸಾರ್ವಜನಿಕರಲ್ಲಿ ಸುರಕ್ಷತೆಯ ಭರವಸೆ ಮೂಡಿಸಿದರು. ಗಣಪತಿ ವಿಸರ್ಜನಾ ಮೆರವಣಿಗೆ ಶಾಂತಿಯುತವಾಗಿ ಹಾಗೂ ಸುಗಮವಾಗಿ ನಡೆಯುವಂತೆ ಪೊಲೀಸ್ ಇಲಾಖೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.
ವಿಸರ್ಜನಾ ಕಾರ್ಯಕ್ರಮದ ಭದ್ರತೆಗಾಗಿ  01 ಎಸ್‌ಪಿ, 02 ಹೆಚ್ಚುವರಿ ಎಸ್‌ಪಿ, 03 ಡಿವೈಎಸ್‌ಪಿ, 10 ಸಿಪಿಐ, 20 ಪಿಎಸ್‌ಐ, ಸಿವಿಲ್ ಪೊಲೀಸ್ ಸಿಬ್ಬಂದಿ ಸೇರಿದಂತೆ ಕೆಎಸ್‌ಆರ್‌ಪಿ ಮೂರು ತುಕಡಿ, ಡಿಆರ್ ಎರಡು ತುಕಡಿ ಹಾಗೂ 200 ಹೋಂ ಗಾರ್ಡ್‌ಗಳನ್ನು ನಿಯೋಜಿಸಲಾಗಿದೆ.
ಮೆರವಣಿಗೆ ಸಾಗುವ ಮಾರ್ಗ, ಪ್ರಮುಖ ವೃತ್ತಗಳು ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ, ಸಂಚಾರ ಹಾಗೂ ಸಾರ್ವಜನಿಕರ ಸುರಕ್ಷತೆಗೆ ವಿಶೇಷ ಗಮನ ನೀಡಲಾಗಿದೆ.
 ಕಾರ್ಯಕ್ರಮದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಪೊಲೀಸರು ಕಟ್ಟುನಿಟ್ಟಿನ ನಿಗಾ ವಹಿಸಲಿದ್ದಾರೆ.
10ನೇ ವರ್ಷದ ಹಿಂದೂ ಮಹಾ ಗಣಪತಿ ವಿಸರ್ಜನಾ ಕಾರ್ಯಕ್ರಮವು ಶಾಂತಿ, ಸೌಹಾರ್ದತೆ ಹಾಗೂ ಶಿಸ್ತುಬದ್ಧವಾಗಿ ನಡೆಯುವಂತೆ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ.2ರಿಂದ ಹೆಸರು ಕಾಳು ಖರೀದಿ ಕೇಂದ್ರ ಆರಂಭ!ವಿದ್ಯಾರ್ಥಿಗಳೊಂದಿಗೆ ಸಚಿವೆ ಶೋಭಾ ಕರಂದ್ಲಾಜೆ ಸಂವಾದಪಾವಗಡದಲ್ಲಿ ಬರ ಪರಿಸ್ಥಿತಿ ಅವಲೋಕಿಸಿದ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ಪರ್ಯಾಯ ವ್ಯವಸ್ಥೆ ಮಾಡದೆ ತುಮಕೂರಿನ ಹೆದ್ದಾರಿ ಬಂದ್ಕಾರ್ಮಿಕನ ಸಾವಿಗೆ ನ್ಯಾಯಕ್ಕಾಗಿ ವಿಸಾಕಾ ಕಾರ್ಖಾನೆ ಮುಂದೆ ಬೃಹತ್‌ ಪ್ರತಿಭಟನೆ- Video ನೋಡಿಮೂಲಸೌಕರ್ಯ ಒದಗಿಸಲು ಆಗ್ರಹಿಸಿ ವಸತಿ ಶಾಲಾ ಮಕ್ಕಳ ಪ್ರತಿಭಟನೆಪಾವಗಡದಲ್ಲಿ ಟವರ್‌ ಹತ್ತಿ ಯುವತಿ ಆತ್ಮಹತ್ಯೆಗೆ ಯತ್ನ!ʼಕಲಬೆರಕೆ ರಹಿತ ಪೌಷ್ಠಿಕ ಆಹಾರ ಹಾಗೂ ಕಲಬೆರಕೆ ರಹಿತ ಔಷಧ ದೊರೆಯುವಂತಾಗಬೇಕುʼ- ಮುರಳೀಧರ ಹಾಲಪ್ಪಕೃಷಿ ಹೊಂಡಕ್ಕೆ ಬಿದ್ದ ಪತ್ನಿ ರಕ್ಷಿಸಲು ಹೋದ ಪತಿ; ಇಬ್ಬರೂ ನೀರುಪಾಲು!'ಬಿಜೆಪಿ ಏಜೆಂಟ್ ಗ್ಯಾನೇಶ್ ಕುಮಾರ್ ವಜಾಗೊಳಿಸಿ': ಸಿಪಿಐ ಮುಖಂಡ ಗಿರೀಶ್