ಬೆಂಗಳೂರು: ಕರ್ನಾಟಕದ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರು ಕಂಡುಬಂದಿದ್ದು, ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಖಾಸಗಿ ಆಸ್ಪತ್ರೆಯ ನುರಿತ ವೈದ್ಯರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಪರಮೇಶ್ವರ್ ಅವರಿಗೆ ಹತ್ತಿರದಿಂದ ನಿಗಾವಹಿಸಿ ಅಗತ್ಯ ವೈದ್ಯಕೀಯ ಪರೀಕ್ಷೆ ಹಾಗೂ ಚಿಕಿತ್ಸೆಯನ್ನು ಮುಂದುವರಿಸಿರುವುದಾಗಿ ವರದಿಯಾಗಿದ್ದು, ಲಘು ಹೃದಯಾಘಾತ ಸಂಭವಿಸಿರಬಹುದು ಎಂದು ಹೇಳಲಾಗುತ್ತಿದೆ.
ಸಿಎಂ ಡಿ.ಕೆ. ಶಿವಕುಮಾರ್ ಭೇಟಿ: ಆರೋಗ್ಯ ವಿಚಾರಣೆ
ಡಿಸಿಎಂ ಡಾ. ಜಿ. ಪರಮೇಶ್ವರ್ ಅವರ ಆರೋಗ್ಯ ವ್ಯತ್ಯಯದ ಮಾತಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದಿದ್ದಾರೆ. ನೀಡಲಾಗುತ್ತಿರುವ ಚಿಕಿತ್ಸೆಯ ಬಗ್ಗೆ ವಿಚಾರಿಸಿ, ಪರಮೇಶ್ವರ್ ಅವರು ಶೀಘ್ರದಲ್ಲೇ ಗುಣಮುಖರಾಗಿ ಮತ್ತೆ ಸಕ್ರಿಯ ರಾಜಕಾರಣಕ್ಕೆ ಮರಳಲಿದ್ದಾರೆ ಎಂದು ವೈದ್ಯರು ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಡಾ. ಜಿ.ಪರಮೇಶ್ವರ್ ಅವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೃದಯ ಸಂಬಂಧಿ ವೈದ್ಯರಿಂದ ಚಿಕಿತ್ಸೆ ನೀಡುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗುತ್ತಿದೆ. ಸದ್ಯ ಪರಮೇಶ್ವರ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಅವರು ಆರೋಗ್ಯವಾಗಿ ಆಸ್ಪತ್ರೆಯಿಂದ ಹೊರಬರಲಿದ್ದಾರೆಂದು ಆರೋಗ್ಯ ಸಚಿವ ಯ.ಟಿ. ಖಾದರ್ ಪ್ರತಿಕ್ರಿಯಿಸಿದ್ದಾರೆ.
ಆಸ್ಪತ್ರೆಯತ್ತ ನಾಯಕರು ಅಭಿಮಾನಿಗಳ ದಂಡು;
ರಾಜ್ಯ ಕಂಡ ಹಿರಿಯ ರಾಜಕಾರಣಿ ಜನಾನುರಾಗಿ, ಅಜಾತಶತೃ ಮಾದರಿ ನಡೆ ನುಡಿಯ ನಾಯಕ ಡಾ. ಜಿ. ಪರಮೇಶ್ವರ್ ಅವರ ಆರೋಗ್ಯ ಏರುಪೇರಾಗಿ ಆಸ್ಪತ್ಎಗೆ ದಾಖಲಾದ ಸುದ್ದಿ ತಿಳಿಯುತ್ತಿದ್ದಂತೆ ರಾಜ್ಯದ ಮೂಲೆ ಮೂಲೆಗಳಿಂದ ರಾಜಕೀಯ ಮುಖಂಡರ ನಾಯಕರ ಹಾಗೂ ಸಚಿವ ಶಾಸಕರುಗಳ ದಂಡು ಆಸ್ಪತ್ರೆಯತ್ತ ಹಕರಿದು ಬರುತ್ತಿದೆ. ವಿಶೇಷವಾಗಿ ಕೊರಟಗೆರೆ ವಿಧಾನಸಭಾ ಕ್ಷೇತ್ರದ ನೂರಾರು ಅವರ ಅಭಿಮಾನಿಗಳು ಹಾಗೂ ತುಮಕೂರು ಜಿಲ್ಲೆಯ ಕಾಂಗ್ರೆಸ್ನ ನಾಯಕರು ಪ್ರಮುಖರು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ. ಡಾ.ಜಿ.ಪರಮೇಶ್ವರ್ ಅವರ ಆರೋಗ್ಯ ಆದಷ್ಟು ಬೇಗ ಸುಧಾರಿಸಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.