LIVE TV StateNationalEntertainmentSportsHealth
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಬಾಳೆಹಣ್ಣು ಮಂಡಿಗಳ ಮೇಲೆ ತಹಶೀಲ್ದಾರ್  ದಿಢೀರ್ ದಾಳಿ

ಪಾವಗಡ: ಸಾರ್ವಜನಿಕರಿಂದ  ದೂರು ಬಂದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಆಹಾರ ಕಲಬೆರಕೆ ತಡೆಗಟ್ಟುವ ನಿಟ್ಟಿನಲ್ಲಿ ತಹಸೀಲ್ದಾರ್ ವೈ. ರವಿ ನೇತೃತ್ವದ ಅಧಿಕಾರಿಗಳ ತಂಡ ಬುಧವಾರ ಸಂಜೆ ಪಟ್ಟಣದ ಹೊಸ ಬಸ್ ನಿಲ್ದಾಣದ ಸುತ್ತಮುತ್ತಲಿನ ಹಣ್ಣು  ಮತ್ತು ಬಾಳೆಹಣ್ಣು ಮಂಡಿಗಳು ಹಾಗೂ ಅಂಗಡಿಗಳ ಮೇಲೆ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಲಾಯಿತು.

ಪಾವಗಡ ಪಟ್ಟಣದಲ್ಲಿ ಕಳೆದ ಹಲವಾರು ವರ್ಷಗಳಿಂದ ಬಾಳೆಹಣ್ಣು ಸೇರಿದಂತೆ ವಿವಿಧ ಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ರಾಸಾಯನಿಕ ಪದಾರ್ಥಗಳನ್ನು ಬಳಸಲಾಗುತ್ತಿದೆ ಹಾಗೂ ಆಹಾರ ಪದಾರ್ಥಗಳಲ್ಲಿ ಕೃತಕ ಬಣ್ಣ ಬಳಕೆಯಾಗುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ಹಣ್ಣುಗಳ ಸಂಗ್ರಹಣೆ, ಸ್ವಚ್ಛತೆ ಹಾಗೂ ವ್ಯಾಪಾರಸ್ಥರು ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಪರಿಶೀಲಿಸಿದರು.

ಈ ವೇಳೆ ಕೆಲವು ಹಣ್ಣುಗಳ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದೆ. ಪ್ರಯೋಗಾಲಯದ ವರದಿ ಬಂದ ಬಳಿಕ ಹಣ್ಣುಗಳಿಗೆ ರಾಸಾಯನಿಕ ಬಳಕೆ ಮಾಡಲಾಗಿದೆಯೇ ಎಂಬುದರ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆಹಾರ ಪದಾರ್ಥಗಳಲ್ಲಿ ಯಾವುದೇ ಕೃತಕ ಬಣ್ಣ ಅಥವಾ ಆರೋಗ್ಯಕ್ಕೆ ಹಾನಿಕಾರಕ ರಾಸಾಯನಿಕಗಳನ್ನು ಬಳಸಬಾರದು. ಮಂಡಿಗಳು ಹಾಗೂ ಅಂಗಡಿಗಳ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ತಹಸೀಲ್ದಾರ್ ವೈ. ರವಿ ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದರು.

ಈ ವೇಳೆ ಪುರಸಭೆ ಮುಖ್ಯಾಧಿಕಾರಿ ಜಾಫರ್ ಷರೀಫ್, ಹಿರಿಯ ಆರೋಗ್ಯ ನಿರೀಕ್ಷಕ ಶಂಸುದ್ದೀನ್, ಕಸಬಾ ಆರ್‌.ಐ. ರಾಜಗೋಪಾಲ್ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ.2ರಿಂದ ಹೆಸರು ಕಾಳು ಖರೀದಿ ಕೇಂದ್ರ ಆರಂಭ!ವಿದ್ಯಾರ್ಥಿಗಳೊಂದಿಗೆ ಸಚಿವೆ ಶೋಭಾ ಕರಂದ್ಲಾಜೆ ಸಂವಾದಪಾವಗಡದಲ್ಲಿ ಬರ ಪರಿಸ್ಥಿತಿ ಅವಲೋಕಿಸಿದ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ಪರ್ಯಾಯ ವ್ಯವಸ್ಥೆ ಮಾಡದೆ ತುಮಕೂರಿನ ಹೆದ್ದಾರಿ ಬಂದ್ಕಾರ್ಮಿಕನ ಸಾವಿಗೆ ನ್ಯಾಯಕ್ಕಾಗಿ ವಿಸಾಕಾ ಕಾರ್ಖಾನೆ ಮುಂದೆ ಬೃಹತ್‌ ಪ್ರತಿಭಟನೆ- Video ನೋಡಿಮೂಲಸೌಕರ್ಯ ಒದಗಿಸಲು ಆಗ್ರಹಿಸಿ ವಸತಿ ಶಾಲಾ ಮಕ್ಕಳ ಪ್ರತಿಭಟನೆಪಾವಗಡದಲ್ಲಿ ಟವರ್‌ ಹತ್ತಿ ಯುವತಿ ಆತ್ಮಹತ್ಯೆಗೆ ಯತ್ನ!ʼಕಲಬೆರಕೆ ರಹಿತ ಪೌಷ್ಠಿಕ ಆಹಾರ ಹಾಗೂ ಕಲಬೆರಕೆ ರಹಿತ ಔಷಧ ದೊರೆಯುವಂತಾಗಬೇಕುʼ- ಮುರಳೀಧರ ಹಾಲಪ್ಪಕೃಷಿ ಹೊಂಡಕ್ಕೆ ಬಿದ್ದ ಪತ್ನಿ ರಕ್ಷಿಸಲು ಹೋದ ಪತಿ; ಇಬ್ಬರೂ ನೀರುಪಾಲು!'ಬಿಜೆಪಿ ಏಜೆಂಟ್ ಗ್ಯಾನೇಶ್ ಕುಮಾರ್ ವಜಾಗೊಳಿಸಿ': ಸಿಪಿಐ ಮುಖಂಡ ಗಿರೀಶ್